Adamya Chetana

Adamya Green #491

ಮೇ 25, 2025 ರಂದು ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆ, ಅನಂತವನ ಆವರಣದಲ್ಲಿ ಅದಮ್ಯ ಚೇತನದ 491ನೇ ಹಸಿರು ಭಾನುವಾರ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಸ್ಥಳವನ್ನು ಸ್ವಚ್ಛಗೊಳಿಸಿ, ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಅನಂತವನದಲ್ಲಿ ನಡೆದ ಈ ಕಾರ್ಯಕ್ರಮ ಪರಿಸರಪ್ರೇಮಿಗಳನ್ನು ಒಂದೆಡೆ ಸೇರಿಸಿ, ನಿಸರ್ಗದೊಂದಿಗಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಿತು.
ಇಂತಹ ಚಟುವಟಿಕೆಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂಬದು ನಮ್ಮೆಲ್ಲರ ಆಶಯ.

ಈ ಸಂದರ್ಭದಲ್ಲಿ, ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು, ಪರಿಸರ ಸ್ನೇಹಿಗಳು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.